ರೈತನ ಉಸಿರು ನಿಲ್ಲಿಸಿದ ಸಾಲ..


02-11-2017 1285

ಗದಗ: ಸಾಲ ಬಾಧೆಯಿಂದ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಯಪ್ಪ ಬೂಶೆಟ್ಟಿ (59) ಆತ್ಮಹತ್ಯೆಗೆ ಮಾಡಿಕೊಂಡಿರುವ ರೈತ ಎಂದು ಗುರುತಿಸಲಾಗಿದೆ.

ಗದಗ ಜಿಲ್ಲೆ ಲಕ್ಷ್ಮೇಶ್ವರ ಬಳಿಯ ರಾಮಗಿರಿಯ ನಿವಾಸಿಯಾಗಿದ್ದ, ರಾಯಪ್ಪ ಬೂಶೆಟ್ಟೆ ಅವರು ಹಲವಾರು ವರ್ಷಗಳಿಂದ ಕೃಷಿ ಕಾಯಕದಲ್ಲಿ ತೊಡಗಿಕೊಂಡಿದ್ದರು. ವ್ಯವಸಾಯಕ್ಕಾಗಿ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತು ಖಾಸಗಿ ವ್ಯಕ್ತಿಗಳ ಹತ್ತಿರ 70 ಸಾವಿರ ರೂ. ಸಾಲ ಮಾಡಿಕೊಂಡಿದ್ದರು. ಈ ಬಾರಿ ಜಿಲ್ಲೆಯಲ್ಲಿ ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ಸಂಪೂರ್ಣವಾಗಿ ಬೆಳೆ ನಾಶವಾಗಿದ್ದು, ಭಾರೀ ನಷ್ಟವಾಗಿದೆ. ಹೀಗಾಗಿ ಸಾಲ ಹಿಂದಿರುಗಿಸಲಾಗುತ್ತಿಲ್ಲ ಎಂದು, ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Kannada News Karnataka ಆತ್ಮಹತ್ಯೆ ಸಹಕಾರಿ ಸಂಘ