‘ಸ್ವಂತ ಬಲದಿಂದ ಜೆಡಿಎಸ್ ಅಧಿಕಾರಕ್ಕೇರಲ್ಲ’


03-11-2017 1397

ತುಮಕೂರು: ತುಮಕೂರಿನಲ್ಲಿ ನಡೆಯುತ್ತಿರುವ ಬಿಜೆಪಿಯ ಪರಿವರ್ತನಾ ರ‍್ಯಾಲಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು, ಮಾತನಾಡಿದ್ದು, ಈ ವೇಳೆ ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ತಮ್ಮ ಭಾಷಣದಲ್ಲಿ, ಜೆಡಿಎಸ್ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದ ಅವರು,  ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಒಂದಾಗಿದ್ದಾರೆ, ಅವರಿಂದ ಅಭಿವೃದ್ದಿ ಸಾಧ್ಯವಿಲ್ಲ, ಸಮೀಕ್ಷೆ ಹೇಳುತಿದೆ ಯಾವುದೇ ಕಾರಣಕ್ಕೂ ಜೆಡಿಎಸ್ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವುದಿಲ್ಲ ಎಂದರು.

ಪರಿವರ್ತನಾ ಯಾತ್ರೆ ಹೊರಡುತಿದ್ದಂತೆ ಸಿಎಂ ಕುರ್ಚಿ ಅಲ್ಲಾಡಿದೆ, ಪರಿವರ್ತನಾ ಯಾತ್ರೆಗೆ ಅನುಮತಿ ನೀಡದೆ ಸತಾಯಿಸಿದ್ದಾರೆ, ಸಿದ್ದರಾಮಯ್ಯನವರೇ ಪ್ರಜಾತಂತ್ರದ ಮೇಲೆ ನಂಬಿಕೆ ಇದೆಯಾ, ಅದಕ್ಕೆ ಪೂರಕವಾಗಿ ನಡೆದುಕೊಳ್ಳುತ್ತಿದ್ದೀರಾ ನಮ್ಮ ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ಸಿಎಂ ವಿರುದ್ಧ ಗುಡುಗಿದ್ದಾರೆ.

ತುರುವೇಕೆರೆ ಕ್ಷೇತ್ರವನ್ನು ಒಂದು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇವೆ, ಹಾಗಾಗಿ ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಮ್ ಅವರನ್ನು ಬೆಂಬಲಿಸಿ ಎಂದು ಶೊಭಾ ಕರಂದ್ಲಾಜೆ ತುರುವೇಕೆರೆ ಜನರಲ್ಲಿ ಮನವಿ ಮಾಡಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Kannada News Karnataka ತುರುವೇಕೆರೆ ಸಿಎಂ ಕುರ್ಚಿ