‘ಖಾಸಗೀಕರಣ ನಮ್ಮ ಉದ್ದೇಶವಲ್ಲ’


03-11-2017 980

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ವ್ಯವಸ್ಥೆಯನ್ನು ಖಾಸಗೀಕರಣ ಮಾಡುವ ಯಾವುದೇ ಉದ್ದೇಶವಿಲ್ಲ ಎಂದು ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ನಗರ ಸಾರಿಗೆ ವ್ಯವಸ್ಥೆಯನ್ನು ಉತ್ತಮಗೊಳಿಸಲು ಕ್ರಮ ಕೈಗೊಳ್ಳಲಾಗುವುದು, ಬೆಂಗಳೂರು ನಗರ ಸಾರಿಗೆ ವ್ಯವಸ್ಥೆ ಸುಧಾರಣೆಗೆ 3 ಸಾವಿರ ಬಸ್‍ಗಳ ಸೇರ್ಪಡೆ ಮಾಡಲಾಗುವುದು, ವಿದ್ಯಾರ್ಥಿಗಳು ಮತ್ತು ಮಹಿಳೆಯರಿಗೆ ಬೆಂಗಳೂರಿನ ಆಯ್ದ ಪ್ರದೇಶಗಳಿಗೆ ರಿಯಾಯಿತಿ ದರದಲ್ಲಿ ಸಂಚರಿಸಲು ಶೀಘ್ರದಲ್ಲೇ ಇಂದಿರಾ ಸಾರಿಗೆ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

9 ಲಕ್ಷ ಕಿಲೋ ಮೀಟರ್ ಸಂಚರಿಸಿರುವ ಬಸ್‍ ಗಳನ್ನು ಬದಲಾವಣೆ ಮಾಡಲಾಗುವುದು, ಆರ್.ಟಿ.ಒದಲ್ಲಿ ಉತ್ತಮ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವರು ತಿಳಿಸಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Kannada News Karnataka ಖಾಸಗೀಕರಣ ಆರ್.ಟಿ.ಒ