'ಮುಷ್ಕರ ಮಾಡುವ ಅಗತ್ಯವಿರಲಿಲ್ಲ’- ಸಿಎಂ


03-11-2017 938

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆ ಅಂಗೀಕಾರಕ್ಕೂ ಮುನ್ನವೇ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆಗಿಳಿದಿರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ವೈದ್ಯರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಇಂಡಿಯನ್ ರೋಡ್ ಕಾಂಗ್ರೆಸ್ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ವೈದ್ಯರು ನಡೆಸುತ್ತಿರುವ ಮುಷ್ಕರದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆ ಜಾರಿಗೆ ತರಬೇಕೆಂದು ಮುಂದಾಗಿದ್ದೇವೆ. ಈ ಬಗ್ಗೆ ಜನ ಏನು ಹೇಳುತ್ತಾರೆಂದು ಕಾಯುತ್ತಿದ್ದೇವೆ. ಮಸೂದೆ ಮಂಡನೆಗೂ ಮನ್ನವೇ ವೈದ್ಯರು ಪ್ರತಿಭಟನೆಗೆ ಇಳಿದಿದ್ದಾರೆ, ಇದು ಸರಿಯಾದ ಕ್ರಮವಲ್ಲ ಎಂದರು.

ಪ್ರತಿಭಟನೆ ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು, ಅಗತ್ಯ ಔಷಧಿ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಜರಿರಬೇಕು. ವೈದ್ಯರು ಮುಷ್ಕರ ಮಾಡುವ ಅಗತ್ಯವಿರಲಿಲ್ಲ ಎಂದರು.


ಒಂದು ಕಮೆಂಟನ್ನು ಬಿಡಿ