ಪ್ರಜ್ವಲ್ ಗೆ ದೇವೇಗೌಡರ ಗ್ರೀನ್ ಸಿಗ್ನಲ್..


06-11-2017 995

ಹಾಸನ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದು ಬಹುತೇಕ ಖಚಿತಪಟ್ಟಿದೆ. ಈ ಕುರಿತಂತೆ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ.  ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾತುರನಾಗಿದ್ದು, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ಅದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ತಿಳಿಸಿದರು.

ಬೇಲೂರು ಅಥವಾ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಜ್ವಲ್ ಪರ ಒಲವಿದ್ದು, ಈ ಎರಡೂ ಕ್ಷೇತ್ರಗಳಲ್ಲಿ ಯಾವುದಾದರೂ ಒಂದು ಕ್ಷೇತ್ರದಿಂದ ಪ್ರಜ್ವಲ್ ಕಣಕ್ಕಿಳಿಯಲಿದ್ದಾನೆ ಎಂದರು. ಆದರೆ ಪ್ರಜ್ವಲ್ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ. ಅವರ ತೀರ್ಮಾನವನ್ನು ಪ್ರಜ್ವಲ್ ಶಿರಸಾ ಪಾಲಿಸಲಿದ್ದಾನೆ ಎಂದು ಭವಾನಿ ರೇವಣ್ಣ ಹೇಳಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Kannada News Karnataka ಪ್ರಜ್ವಲ್ ರೇವಣ್ಣ ಬೇಲೂರು