ಬಸ್ ಅಪಘಾತ 25 ಮಂದಿಗೆ ಗಾಯ


16-11-2017 248

ಬೆಂಗಳೂರು: ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‍ನಲ್ಲಿದ್ದ ಹಲವರು ಗಾಯಗೊಂಡಿರುವ ಘಟನೆ, ದಾಬಸ್ ಪೇಟೆಯ ರಾಯರಪಾಳ್ಯ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4 ರ ತುಮಕೂರು ರಸ್ತೆಯಲ್ಲಿರುವ ರಾಯರಪಾಳ್ಯ ಬಳಿ ಅಪಘಾತ ಸಂಭವಿಸಿದ್ದು,  ಬಸ್‍ನಲ್ಲಿದ್ದ 25 ಜನರು ಗಾಯಗೊಂಡಿದ್ದಾರೆ. ಬೆಂಗಳೂರಿಂದ ಶಿರಾ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಹಿಂಬದಿಯಿಂದ ಕಂಟೇನರ್‍ ಗೆ ಡಿಕ್ಕಿ ಹೊಡೆದು ಈ ಅವಘಡ ನಡೆದಿದೆ.

ಗಾಯಾಳುಗಳನ್ನು ತುಮಕೂರು ಆಸ್ಪತ್ರೆಗೆ ರವಾನನಿಸಲಾಗಿದ್ದು, ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಹಾಗೂ ಕ್ಲೀನರ್ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Accident Lorry ಕಂಟೇನರ್ ಬಸ್ ಡಿಕ್ಕಿ