ಹೆಚ್ಚಾಗ್ತಿದೆ ರೋಗಿಗಳ ಪರದಾಟ


17-11-2017 221

ಗದಗ: ಕೆಪಿಎಂಇ ತಿದ್ದುಪಡಿ ವಿಧೇಯಕ ವಿರೋಧಿಸಿ ಖಾಸಗಿ ವೈದ್ಯರ ಮುಷ್ಕರ ಹಿನ್ನೆಲೆ, ಗದಗ ಜಿಲ್ಲಾದ್ಯಂತ ಇಂದೂ ಕೂಡ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದವು. ವೈದ್ಯರಿಗಾಗಿ ಕಾದು ಕಾದು, ಸಕಾ೯ರಿ ಆಸ್ಪತ್ರೆಗಳತ್ತ ರೋಗಿಗಳು ಧಾವಿಸುತ್ತಿದ್ದಾರೆ. ಅದಲ್ಲದೇ ಜಿಲ್ಲೆಯಲ್ಲಿ ಚಿಕಿತ್ಸೆಗಾಗಿ ರೋಗಿಗಳ ಪರದಾಟ ಮುಂದುವರೆದಿದೆ. ಇನ್ನು ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದ್ದು, ರೋಗಿಗಳಿಗೆ ಸಮಸ್ಯೆ ಆಗದಂತೆ ಜಿಮ್ಸ್ ಆಡಳಿತ ಮಂಡಳಿ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ.

ಇನ್ನು ಬಾಗಲಕೋಟೆಯಲ್ಲಿ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾರೆ. ವಿದ್ಯಾ ಕಲ್ಯಾಣಿಶೆಟ್ಟಿ(35)ಮೃತ ಮಹಿಳೆ ಎಂದು ತಿಳಿದು ಬಂದಿದೆ. 15 ದಿನಗಳ ಹಿಂದೆ ಹೃದಯ ಸಂಬಂಧಿ  ಖಾಯಿಲೆಗೊಳಗಾಗಿದ್ದು, ಚಿಕಿತ್ಸೆಗಾಗಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಮುಷ್ಕರ ಹಿನ್ನೆಲೆ ಚಿಕಿತ್ಸೆ ನೀಡದೆಯೇ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗಿತ್ತು. ಬಳಿಕ ಅವರನ್ನು ಕುಮಾರೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಹಿಳೆ ಉಳಿಯಲಿಲ್ಲ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

KPME Karnataka ಸಕಾ೯ರಿ ಆಸ್ಪತ್ರೆ ಬಾಗಲಕೋಟೆ