ಆಟೋ-ಬೈಕ್ ಮುಖಾಮುಖಿ ಡಿಕ್ಕಿ


18-11-2017 288

ಮೈಸೂರು: ಬೈಕ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಘಟನೆಯು ಮೈಸೂರಿನ ಟಿ.ನರಸೀಪುರ ತಾಲ್ಲೂಕಿನ ಎಳವರಹುಂಡಿ ಬಳಿ ನಡೆದಿದೆ. ಮೃತ ಮಹಿಳೆಯನ್ನು ಡಿ.ಮರಳ್ಳಿ ಗೀತಾ(28) ಎಂದು ಗುರುತಿಸಲಾಗಿದೆ. ಮಹಿಳೆಯು ಗಾರ್ಮೆಂಟ್ಸ್ ಗೆ ತೆರಳುತ್ತಿದ್ದು, ಅವಘಡ ಸಂಭವಿಸಿ ಮೃತಪಟ್ಟಿದ್ದಾರೆ. ಇನ್ನು ಅಪಘಾತದಲ್ಲಿ ಗಂಭೀರ ಗಾಯಗಳಾಗಿದ್ದವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Accident Auto-Bike ಟಿ.ನರಸೀಪುರ ಅವಘಡ