ಜನಾಭಿಪ್ರಾಯಕ್ಕೆ ಮುಂದಾದ ರಾಜ್ಯ ಬಿಜೆಪಿ


21-11-2017 1143

ಮುಂಬರುವ ವಿಧಾನಸಭಾ ಚುನಾವಣಗೆ ಜನಾಭಿಪ್ರಾಯ ಸಂಗ್ರಹಿಸಲು ರಾಜ್ಯ ಬಿಜೆಪಿ ಮುಂದಾಗಿದೆ. ಪ್ರತಿ ಕ್ಷೇತ್ರದಲ್ಲಿ ಕೂಡ ಕನಿಷ್ಠ 5000 ಜನರಿಂದ, ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ. 224 ಕ್ಷೇತ್ರಗಳಲ್ಲೂ ಜನಾಭಿಪ್ರಾಯ ಸಂಗ್ರಹಕ್ಕೆ ಬಿಜೆಪಿಯ ಪ್ರಣಾಳಿಕೆ ಸಮಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಎಸ್.ಸುರೇಶ್ ಕುಮಾರ್ ನೇತೃತ್ವದಲ್ಲಿ ನಿರ್ಮಾಣವಾಗಿರು 12 ನಾಯಕರ ಪ್ರಣಾಳಿಕೆ ಸಮಿತಿಯು, 224ಕ್ಷೇತ್ರಗಳಲ್ಲೂ ಜನಾಭಿಪ್ರಾಯ ಸಂಗ್ರಹಿಸಿ, ಪ್ರಣಾಳಿಕೆ ಸಿದ್ದಪಡಿಸಲು ಬಿಜೆಪಿ ಪ್ಲಾನ್ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆ ಮೇರೆಗೆ ಅಭಿಪ್ರಾಯ ಸಂಗ್ರಹಿಸುತ್ತಿರುವ ಬಿಜೆಪಿ, ಈಗಾಗಲೇ ಅಭಿಪ್ರಾಯ ಸಂಗ್ರಹ ಕಾರ್ಯದಲ್ಲಿ ತೊಡಗಿದೆ. ಎಲ್ಲ ಕ್ಷೇತ್ರಗಳ ಪ್ರಮುಖ ಸಮಸ್ಯೆಗಳನ್ನು ಕ್ರೂಢೀಕರಿಸಿ ಪ್ರಣಾಳಿಕೆ ಸಿದ್ಧಪಡಿಸುವ ಐಡಿಯಾದಲ್ಲಿದೆ ರಾಜ್ಯ ಬಿಜೆಪಿ.


ಒಂದು ಕಮೆಂಟನ್ನು ಬಿಡಿ