10ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು


22-11-2017 881

ಬೆಂಗಳೂರು: ನಗರದಲ್ಲಿ ಕೆಲಸ ಮಾಡುತ್ತಿದ್ದ ಕಂಪನಿಯ 10ನೇ ಮಹಡಿಯಿಂದ ಬಿದ್ದು ಮಹಿಳಾ ಸಾಫ್ಟ್ ವೇರ್ ಎಂಜಿನಿಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಬೆಳ್ಳಂದೂರಿನಲ್ಲಿ ನಡೆದಿದೆ. ಆತ್ಮಹತ್ಯಗೆ ಶರಣಾದ ಮಹಿಳೆಯನ್ನು ಗೀತಾಂಜಲಿ(27)ಎಂದು ಗುರುತಿಸಲಾಗಿದೆ. ಗೀತಾಂಜಲಿ ನಗರದ ಬೆಳ್ಳಂದೂರಿನ ಸೆಸ್ನಾ ಟೆಕ್ ಪಾರ್ಕ್ ನಲ್ಲಿರುವ ಅಡ್ವೊ ಆಪ್ಟಿಕ್ ನೆಟ್ ವರ್ಕ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ಆದರೆ ಇಂದು ಬೆಳಗ್ಗೆ ಕೆಲಸಕ್ಕೆ ಬಂದಿದ್ದ ಗೀತಾಂಜಲಿ ಕಂಪೆನಿಯ 10ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೀತಾಂಜಲಿ ಆತ್ಮಹತ್ಯೆಗೆ ಇದೂವರೆಗೂ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬೆಳ್ಳಂದೂರು ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.


ಒಂದು ಕಮೆಂಟನ್ನು ಬಿಡಿ