ವೇಶ್ಯಾವಾಟಿಕೆ ದಂಧೆ ಇಬ್ಬರ ಬಂಧನ


23-11-2017 623

ಬೆಂಗಳೂರು: ಕಾನೂನು ಬಾಹಿರವಾಗಿ ಹೆಣ್ಣು ಮಕ್ಕಳನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಿತಿ ಸ್ಯಾಮ್ ಥಾಮಸ್(ಮಹಿಳೆ) ಮತ್ತು ಮಹೇಂದ್ರ ಬಂಧಿತ ಆರೋಪಿಗಳು. ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಕೊಂಡಿದ್ದ ಪಶ್ಚಿಮ ಬಂಗಾಳ‌ಮೂಲದ ಯುವತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು, ಅವರಿಂದ 4000 ಸಾವಿರ ನಗದು, ಗಿರಾಕಿಗಳನ್ನು ಸಂಪರ್ಕಿಸಲು ಬಳಸುತ್ತಿದ್ದ 4 ಮೊಬೈಲ್ ಫೋನ್ ಗಳು ಹಾಗೂ 4ನಿರೋಧ್ ಪ್ಯಾಕೆಟ್ಗಳನ್ನು ವಶಕ್ಕೆ ಪಡೆದಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ