ಪಾದಾಚಾರಿಯನ್ನು ಕೊಂದ ಬಸ್ !


23-11-2017 916

ಬೆಂಗಳೂರು: ನಗರದ ಹೊರವಲಯದ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ನಿನ್ನೆ ಮಧ್ಯರಾತ್ರಿ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ನಿವಾಸಿ ಸುನೀಲ್ ಕುಮಾರ್(40)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ರಾತ್ರಿ ಕೂಲಿ ಕೆಲಸ ಮಾಡುತ್ತಿದ್ದ ಸುನೀಲ್‍ಕುಮಾರ್ ರಾತ್ರಿ ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಸುಗಮ ಟ್ರಾವೆಲ್ಸ್ ಬಸ್ ಡಿಕ್ಕಿ ಹೊಡೆದು  ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಿ, ಪ್ರಕರಣವನ್ನು ದಾಖಲಿಸಿಕೊಂಡು, ಬಸ್ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Bus Accident Pedestrian ಪಾಂಡವಪುರ ಸಂಚಾರ ಪೊಲೀಸ್