ಭ್ರಷ್ಟ ಅಧಿಕಾರಿ ವಿರುದ್ಧ ಪ್ರತಿಭಟನೆ !


24-11-2017 1281

ಬೆಂಗಳೂರು: ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಬಿಬಿಎಂಪಿಯ ಎಇಇ ಅಶೋಕ್ ಕುಮಾರ್, ವಾರ್ಡ್ ನಂ 191-192 ಗಳಲ್ಲಿ ಯಾವುದೇ ಕಾಮಗಾರಿ ನಡೆಸದೇ ಅವ್ಯವಹಾರ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಕಸವಿಲೇವಾರಿ, ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ನಡೆಸದೇ, ಅಕ್ರಮವಾಗಿ ತಲೆ ಎತ್ತಿರೋ     ಅಪಾರ್ಟ್‌ಮೆಂಟ್‌ಗಳನ್ನೇ ಬಂಡವಾಳ ಮಾಡಿಕೊಂಡು, ಪಿಓಸಿಓ ನೋಟಿಸ್ ಜಾರಿಗೊಳಿಸೋದಾಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿರುವುದಾಗಿ ತಿಳಿದು ಬಂದಿದೆ. ಇನ್ನು ಅಕ್ರಮವಾಗಿ ಹಣ ವಸೂಲಿ ಮಾಡಿ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿದ್ದು, ಇದನ್ನು ಪ್ರಶ್ನಿಸಲು ಹೋದರೆ, ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಸ್ಥಳೀಯರು  ಹೇಳುತ್ತಿದ್ದಾರೆ. ಇಷ್ಟೆಲ್ಲಾ ಅಕ್ರಮ ನಡೆಸುತ್ತಿರುವ ಎಇಇ ಅಶೋಕ್ ಕುಮಾರ್ ವಿರುದ್ಧ ಕ್ರಮಕ್ಕೆ, ಕರ್ನಾಟಕ ನಾಗರಿಕ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ. ಕೋಣನಕುಂಟೆಯಲ್ಲಿರುವ ಎಕ್ಸಿಕ್ಯೂಟಿವ್ ಎಂಜಿನಿಯರ್ ಕಚೇರಿ ಮುಂದೆ, ಮಹಿಳೆಯರು ಸೇರಿದಂತೆ ನೂರಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

BBMP Assistant Engineer ಭ್ರಷ್ಟಾಚಾರ ಕಾಮಗಾರಿ