ಪ್ರತಿಭಟನೆ: ಕಾಲ್ಕಿತ್ತ ಬೆಸ್ಕಾಂ ಸಿಬ್ಬಂದಿ


25-11-2017 534

ಬೆಂಗಳೂರು: ಬೀದಿ ದೀಪ ಹಾಗೂ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತ ಹಿನ್ನೆಲೆ, ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿರುವ ಗ್ರಾಮಸ್ಥರು, ಭಾರೀ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಹೊರವಲಯದ ದೊಡ್ಡಬಿದರಕಲ್ಲು ಗ್ರಾಮದಲ್ಲಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದು, ಇತ್ತೀಚೆಗೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿರುವ ಮುಖಂಡರು, ಈ ರೀತಿ ಗ್ರಾಮದ ಬೀದಿ ದೀಪ ಮತ್ತು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆ ಬೆಸ್ಕಾಂ ಕಚೇರಿಯಿಂದ, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ. ಇನ್ನು ಶೀಘ್ರವಾಗಿ ಬೀದಿ ದೀಪ ಅಳವಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Bescom Nelamangala ಬೀದಿ ದೀಪ ವಿದ್ಯುತ್ ಸಂಪರ್ಕ