1 ವರ್ಷದ ನಂತರ ಸಿಕ್ಕಿಬಿದ್ದ ಕಳ್ಳರು


28-11-2017 870

ಬೆಂಗಳೂರು: ಮನೆಗಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಮಾಗಡಿ ರಸ್ತೆಯ ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ ಅಲಿಯಾಸ್ ಶೇಖು, ಮಧು, ಮಂಜುನಾಥ್, ಪ್ರದೀಪ್ ಬಂಧಿತರು. ಆರೋಪಿಗಳು  2016 ರಲ್ಲಿ ಹನುಮಂತನಗರ ಠಾಣಾ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡಿದ್ದರು. ಬಂಧಿತರ ಪೈಕಿ ಚಂದ್ರಶೇಖರ್ ಹಾಗೂ ಮಧು ಕೊಲೆ ಪ್ರಕರಣದಲ್ಲಿಯೂ ಭಾಗಿಯಾಗಿದ್ದರು.

ಬಂಧಿತರಿಂದ ನಲ್ವತ್ತು ಲಕ್ಷ ರೂಪಾಯಿ ಮೌಲ್ಯದ 1.300 ಕೆ.ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಹನುಮಂತನಗರ, ಗಿರಿನಗರ, ಚಾಮರಾಜಪೇಟೆ ಸೇರಿದಂತೆ ಹಲವು ಠಾಣೆಗಳಲ್ಲಿ ಇವರು ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಸದ್ಯ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

criminal Robbery ಮನೆಗಳ್ಳತನ ಚಿನ್ನಾಭರಣ