ಮದ್ಯದಂಗಡಿ ವಿರೋಧಿಸಿ ಪ್ರತಿಭಟನೆ !


28-11-2017 738

ಮಂಗಳೂರು: ಮದ್ಯದಂಗಡಿ ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆಯು ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಹೊರವಲಯದ ತಲಪಾಡಿ ಎಂಬಲ್ಲಿ ಹೊಸದಾಗಿ ಮದ್ಯದಂಗಡಿ ತೆರೆಯಲು, ಕಟ್ಟಡ ನಿರ್ಮಿಸಿದ್ದು, ಇದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನೆಡೆಸಿದ್ದಾರೆ. ಇದರ ಮಧ್ಯೆಯೇ ಬಾರ್ ನ ಕಿಟಕಿ ಗಾಜು ಪುಡಿಗೈದು ಕಿಡಿಗೇಡಿಗಳು ದಾಂಧಲೆ ನಡೆಸಿ, ಕಟ್ಟಡಕ್ಕೆ ಹಾನಿಗೈದು ಪೈಪ್ ಒಡೆದು ಹಾಕಿದ್ದಾರೆ. ಮದ್ಯದಂಗಡಿ ವಿರೋಧಿಸಿ ನಿನ್ನೆ ಪ್ರತಿಭಟನೆ ನಡೆಸಿದ್ದ ಗ್ರಾಮಸ್ಥರು, ಪ್ರತಿಭಟನೆ ಬೆನ್ನಲ್ಲೇ ನಿನ್ನೆ ತಡರಾತ್ರಿ ಬಾರ್ ಕಟ್ಟಡಕ್ಕೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಇದರಿಂದ ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ. ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

wine shop villagers protest ಮದ್ಯ ಮಂಗಳೂರು