ಪ್ರತಾಪ್ ಸಿಂಹ ವಿರುದ್ಧ ಸ್ವಾಮೀಜಿ ಕಿಡಿ


30-11-2017 647

ಬಾಗಲಕೋಟೆ: ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಒನಕೆ ಓಬವ್ವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಿನ್ನೆಲೆ, ಬಾಗಲಕೋಟೆಯಲ್ಲಿ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯುಸಿದ್ದು, ಸಂಸದ ಪ್ರತಾಪ್ ಸಿಂಹ ಅವರನ್ನು ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.

ರಾಣಿ ಚೆನ್ನಮ್ಮ ಬ್ರಟೀಷರ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು, ಒನಕೆ ಓಬವ್ವ ಹೈದರಾಲಿಯ ಜೊತೆ ಮಂಚ ಹಂಚಿಕೊಂಡಿದ್ದಳೆಂದು ಅವಹೇಳನ ರೀತಿ ಪೋಸ್ಟ್ ಮಾಡಿದವರ ಮೇಲೆ ರಾಷ್ಟ್ರದ್ರೋಹದ ಕೇಸ್ ದಾಖಲಿಸುವಂತೆ ಸಿಎಂರನ್ನು ಆಗ್ರಹಿಸಿದ್ದಾರೆ. ಐ ಸಪೋರ್ಟ್ ಪ್ರತಾಪ್ ಸಿಂಹ, ಐ ಸಪೋರ್ಟ್ ನರೇಂದ್ರ ಮೋದಿ, ಎಂಬ ಫೇಸ್ ಬುಕ್ ಅಕೌಂಟ್ ನಲ್ಲಿ ಈ ರೀತಿಯ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು.


ಒಂದು ಕಮೆಂಟನ್ನು ಬಿಡಿ