ಮೂವರು ಕೊಲೆ ಆರೋಪಿಗಳ ಬಂಧನ


06-12-2017 443

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನ ಜೆಡಿಎಸ್ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮದ್ದೂರಿನ ಕೊಪ್ಪ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾದನಾಯಕನಹಳ್ಳಿಯ ನವೀನ್, ಮಲ್ಲಿಗೆರೆಯ ಸುರೇಶ್, ಮತ್ತು ಬೆಂಗಳೂರಿನ ಹರೀಶ್ ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳು ಮತ್ತು ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಳೆದ ನವೆಂಬರ್ 29ರಂದು ಮದ್ದೂರಿನ ಕೌಡ್ಲೆ ಸಮೀಪ ಜೆಡಿಎಸ್ ಕಾರ್ಯಕರ್ತನಾದ ಸಂತೋಷ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.  ಕೊಲೆ ಮಾಡಿದ ನಂತರ ಆರೋಪಿಗಳು ಬೆಂಗಳೂರಿನಲ್ಲಿ ತಲೆಮರಿಸಿಕೊಂಡಿದ್ದರು. ಇನ್ನು ಕಾರ್ಯಾಚರಣೆಗಿಳಿದಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Maddur Murder police police Operation