ಬೆಳಗಾವಿಯಲ್ಲಿ ರೈತರ ಪ್ರತಿಭಟನೆ


08-12-2017 353

ಬೆಳಗಾವಿ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ, ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದೆ. ಕೃಷಿ ಉತ್ಪನ್ನಗಳಿಗೆ ಪರಿಷ್ಕೃತ ದರ ನಿಗಧಿ, ಬೆಳೆದ ಬೆಳೆಗೆ ಖರೀದಿ ಕೇಂದ್ರಗಳು, ಸೌಭಾಗ್ಯ ಲಕ್ಷ್ಮಿ ಹಾಗೂ ಶಿವಸಾಗರ ಸಕ್ಕರೆ ಕಾರ್ಖಾನೆಯ ಕಬ್ಬಿನ ಬಾಕಿ ಬಿಲ್ ಅನ್ನು ಬಡ್ಡಿ ಸಮೇತ ರೈತರಿಗೆ ಕೊಡಬೇಕು ಮತ್ತು ಸಮಗ್ರ ನೀರಾವರಿ ಯೋಜನೆ ಜಾರಿ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಧರಣಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗಿಯಾಗಿದ್ದು, ಸ್ಥಳಕ್ಕೆ ಉಸ್ತುವಾರಿ ಸಚಿವರು ರಮೇಶ್ ಜಾರಕಿಹೊಳಿ ಭೇಟಿ ನೀಡಿವಂತೆ ಒತ್ತಾಯಿಸಿದರು.


ಒಂದು ಕಮೆಂಟನ್ನು ಬಿಡಿ