‘89 ಕ್ಷೇತ್ರಗಳಲ್ಲಿ ಪರಿವರ್ತನಾ ಯಾತ್ರೆ ಪೂರ್ಣ’


11-12-2017 503

ಕಲಬುರಗಿ: ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಶರಣರ ನಾಡು ಬಸವ ಕಲ್ಯಾಣದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸುವುದಾಗಿ, ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕಲಬುರಗಿಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆಯ ವೀರಶೈವ ಲಿಂಗಾಯತ ನೌಕರರ ರಾಜ್ಯ ಮಟ್ಟದ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಯಾತ್ರೆ ಈಗಾಗಲೇ 89 ಕ್ಷೇತ್ರಗಳಲ್ಲಿ ಪೂರ್ಣಗೊಂಡಿದ್ದು, ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ ಎಂದರು.

ಜನ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಗೊಂಡಿರುವುದು ಯಾತ್ರೆಗೆ ಸೇರುತ್ತಿರುವ ಜನ ಸಾಗರವೇ ನಿರೂಪಿಸುತ್ತಿದೆ ಎಂದರು. ಎನ್ಇಕೆಎಸ್ಆರ್ಟಿಸಿಗೆ ನೀಡಲಾಗುತ್ತಿದ್ದ ಮೋಟಾರು ವಾಹನ ತೆರಿಗೆ ವಿನಾಯಿತಿ ಮುಂದುವರಿಸಬೇಕು. ಈಗಿನ ಕಾಂಗ್ರೆಸ್ ಸರ್ಕಾರ ಮುಂದುವರೆಸದಿದ್ದಲ್ಲಿ ಮುಂದೆ ತಾವು ಅಧಿಕಾರಕ್ಕೆ ಬಂದ ತಕ್ಷಣ ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಹೇಳಿದರು. ಇದಲ್ಲದೇ ಸಾರಿಗೆ ನಿವೃತ್ತ ನೌಕರರಿಗೆ 10 ಸಾವಿರ ರೂ.ಪಿಂಚಣಿ ಹಾಗೂ ಆರೋಗ್ಯ ವಿಮೆ ಸೌಲಭ್ಯಗಳು ಜಾರಿಗೆ ಬರುವುದು ಅಗತ್ಯವಾಗಿದೆ ಎಂದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

B.S yeddyurappa KSRTC ವಾಹನ ತೆರಿಗೆ ಆರೋಗ್ಯ