ಮೊಬೈಲ್ ಗಾಗಿ ನೇಣುಬಿಗಿದುಕೊಂಡ ಯುವಕ


14-12-2017 475

ರಾಮನಗರ: ಕ್ಷುಲ್ಲಕ ಕಾರಣಕ್ಕೆ ಮನನೊಂದ ಯುವಕ ನೇಣಿಗೆ ಶರಣಾಗಿರುವ ದಾರುಣ ಘಟನೆಯು, ರಾಮನಗರದಲ್ಲಿ ನಡೆದಿದೆ. ಮೊಬೈಲ್ ಕೊಡಿಸಿಲ್ಲ ಎನ್ನುವ ಕಾರಣಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದ ನಿವಾಸಿ ಪುನೀತ್ (22)ಮೃತ ಯುವಕ. ಮನೆಯ ಪಕ್ಕದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಇನ್ನು ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Suicide Hang suicide ಕ್ಷುಲ್ಲಕ ಗ್ರಾಮಾಂತರ