‘ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲ್ಲ’


18-12-2017 462

ಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು, ಗೃಹ ಸಚಿವ ರಾಮಲಿಗಾರೆಡ್ಡಿ ಹೇಳಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಇನ್ನಷ್ಟು ಸಂಘಟನೆ ಮಾಡಿದ್ದರೆ ಇನ್ನೊಂದಿಷ್ಟು ಮುಂದೆ ಹೋಗಬಹುದಿತ್ತು ಎಂದು ಅಭಿಪ್ರಾಯ ಪಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ಕೆಲಸ ಮಾಡುತ್ತೆ ಆದರೆ ಪ್ರಚಾರ ತೆಗೆದುಕೊಳ್ಳಲ್ಲ, ಬಿಜೆಪಿಯವರು ಕೆಲಸ ಮಾಡದೇ ಪ್ರಚಾರ ತೆಗೆದುಕೊಳ್ಳುತ್ತಾರೆ ಎಂದರು. ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗುವುದಕ್ಕೂ ಮೊದಲೇ ಚುನಾವಣೆ ನಡೆದಿತ್ತು, ಹಾಗಾಗಿ ರಾಹುಲ್ ಗಾಂಧಿ ಅಧ್ಯಕ್ಷರಾಗಿದ್ದಕ್ಕೆ ಸಂಬಂಧ ಕಲ್ಪಿಸುವುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Ramalinga Reddy Rahul Gandhi ಗೃಹ ಸಚಿವ ಅಭಿಪ್ರಾಯ