ಅತ್ಯಾಚಾರಿಗೆ ಕಠಿಣ ಶಿಕ್ಷೆಗೆ ಆಗ್ರಹ


20-12-2017 396

ವಿಜಯಪುರ: ವಿಜಯಪುರ ನಗರದ ಆದರ್ಶ ನಗರದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ‌ ಬಾಲಕಿಯ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಕುಟುಂಬಸ್ಥರು ಹಾಗೂ ದಲಿತ ಪರ ಸಂಘಟನೆಗಳು ರಾತ್ರಿಯಿಡೀ ಜಿಲ್ಲಾಧಿಕಾರಿ ನಿವಾಸದ ಬಳಿಯೂ ಪ್ರತಿಭಟಿಸಿದ್ದಾರೆ. ಈ ವೇಳೆ ರಸ್ತೆ ಮೇಲೆ‌ ಟೈರ್ ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಜನರು ಸೇರಿದ್ದು ರಸ್ತೆ ಬಂದ್ ಮಾಡಿ, ವಾಹನ ಸಂಚಾರ ಸ್ಥಗಿತಗೊಳಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕುಟುಂಬಸ್ಥರು ಮತ್ತು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇನ್ನು ಈ ಕುರಿತಂತೆ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು, ಮೃತ ಬಾಲಕಿಯ ಕುಟುಂಬಕ್ಕೆ ವೈಯಕ್ತಿಕವಾಗಿ 5ರೂ ಲಕ್ಷ ಪರಿಹಾರ ಘೋಷಿಸಿದ್ದಾರೆ, ಅಲ್ಲದೇ ಸರಕಾರದಿಂದಲೂ ರೂ. 8 ಲಕ್ಷ ಪರಿಹಾರ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದಾರೆ. ಸಚಿವರು ಭರವಸೆ ನೀಡಿದ ಹಿನ್ನೆಲೆ ಬಾಲಕಿ ಪೋಷಕರು ಪ್ರತಿಭಟನೆ ಹಿಂದಕ್ಕೆ ಪಡೆದಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Rape Minor Girl ಜಿಲ್ಲಾಧಿಕಾರಿ ಪ್ರತಿಭಟನೆ