‘ಅಸಂಬದ್ಧ ಹೇಳಿಕೆಗಳನ್ನು ನೀಡಬೇಡಿ’


28-12-2017 571

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದದ ಕುರಿತು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಮಹದಾಯಿ ಕುರಿತು ಹೇಳಿಕೆಗಳನ್ನು ಕೊಡುವಾಗ ಎಚ್ಚರಿಕೆ ವಹಿಸುವಂತೆ ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ. ಸುಮ್ಮಸುಮ್ಮನೆ ಅಸಂಬದ್ಧ ಹೇಳಿಕೆಗಳನ್ನು ಬಿಡಬೇಡಿ ಎಂದು ಹೇಳಿದ್ದಾರೆ. ಅಲ್ಲದೇ ರಾಜ್ಯ ನಾಯಕರು ಮಹದಾಯಿ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಿ, ಸ್ವಲ್ಪ ಎಡವಿದರೂ ಪರಿಸ್ಥಿತಿಯನ್ನು ಬಿಜೆಪಿ ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲಿದೆ ಎಂದು ರಾಜ್ಯದ ಕಾಂಗ್ರೆಸ್ ನಾಯಕರಿಗೆ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

ಇನ್ನು ಕೆಪಿಸಿಸಿ ಎದುರು ಬಿಜೆಪಿ ನಾಯಕರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿ ನಾಯಕರ ಪ್ರತಿಭಟನೆಗೆ ಅವಕಾಶ ನೀಡಬಾರದಿತ್ತು, ಇದೇ ಮೊದಲ ಬಾರಿಗೆ ಮತ್ತೊಂದು ಪಕ್ಷದ ನಾಯಕರಿಂದ ಪಕ್ಷದ ಕಚೇರಿ ಮುಂದೆ ಪ್ರತಿಭಟನೆ ನಡೆದಿದೆ, ಈ ಬೆಳವಣಿಗೆ ಪಕ್ಷಕ್ಕೆ ಪೂರಕವಾಗಿಲ್ಲ ಎಂದಿದ್ದಾರೆ. ಸರ್ಕಾರ ಮತ್ತು ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡಬಾರದಿತ್ತು, ಬಿಜೆಪಿ ಪ್ರತಿಭಟನೆಯಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆ ಬಂದಿದೆ ಎಂದು ಸರ್ಕಾರದ ವಿರುದ್ಧ ಕೆ.ಸಿ.ವೇಣುಗೋಪಾಲ್ ಅಸಮಧಾನ ಹೊರಹಾಕಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

K.C.Venugopal KPCC ಅಸಂಬದ್ಧ ಮಹದಾಯಿ