ಇಂದು ಬಾಗೇಪಲ್ಲಿಗೆ ಸಿಎಂ


29-12-2017 557

ಚಿಕ್ಕಬಳ್ಳಾಪುರ: ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಬಾಗೇಪಲ್ಲಿ ಪಟ್ಟಣದಲ್ಲಿನ ಕ್ರೀಡಾಂಗಣದಲ್ಲಿ ಸಾಧನಾ ಸಮಾವೇಶ ಕಾರ್ಯಕ್ರಮ ಅಯೋಜಿಸಿಲಾಗಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮ ನಡೆಯಲಿವೆ. ಇದೇ ವೇಳೆ ನುಡಿದಂತೆ ನಡೆದಿದ್ದೇವೆ, ಸಾಧನಾ ಸಂಭ್ರಮ ಎಂಬ ಪುಸ್ತಕವನ್ನು ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಗೃಹಸಚಿವ ರಾಮಲಿಂಗಾರೆಡ್ಡಿ, ಸಂಸದ ಡಾ.ಎಂ ವೀರಪ್ಪ ಮೊಯಿಲಿ ಸೇರಿದಂತೆ ಹಲವು ಸಚಿವರು ಭಾಗಿಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.


ಒಂದು ಕಮೆಂಟನ್ನು ಬಿಡಿ