ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಕಳ್ಳರು


29-12-2017 324

ಕೊಪ್ಪಳ: ಕಳ್ಳತನ ಮಾಡುವಾಗ ಗ್ರಾಮಸ್ಥರ ಕೈಗೆ ಕಳ್ಳರಿಬ್ಬರು ಸಿಕ್ಕಿಬಿದ್ದಿದ್ದಾರೆ. ಘಟನೆಯು, ಕೊಪ್ಪಳ ತಾಲ್ಲೂಕಿನ ಬಿಸರಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಅಜಯ್ ಎನ್ನುವವರ ಅಂಗಡಿ ಕಳ್ಳತ ಮಾಡಲು ಬಂದಿದ್ದ, ಕುಮಾರ್, ಲಕ್ಷ್ಮಣ ಎಂಬುವರು ಸಿಕ್ಕಿಬಿದ್ದಿದ್ದು, ಸಿದ್ದಲಿಂಗಪ್ಪ ಎಂಬ ವ್ಯಕ್ತಿ ತಪ್ಪಿಸಿಕೊಂಡು ಓಡಿಹೋಗಿದ್ದಾನೆ. ಇನ್ನು ಸಿಕ್ಕಿಬಿದ್ದ ಕಳ್ಳರನ್ನು ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರು ಕೂಡಿಹಾಕಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಕಳ್ಳರನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಳವಂಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Thief arrested robbery ಕಳ್ಳತನ ಪಂಚಾಯತಿ