ಕಿಟಕಿ ಮೂಲಕ ಖೈದಿ ಪರಾರಿ

ಕೊಡಗು: ಸಿನಿಮೀಯ ರೀತಿಯಲ್ಲಿ ಆಸ್ಪತ್ರೆಯಿಂದ ಖೈದಿಯೊಬ್ಬ ಪರಾರಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದೆ. ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ನಿವಾಸಿ ಗಣೇಶ್(ಗಣಪತಿ) ತಪ್ಪಿಸಿಕೊಂಡ ಖೈದಿ. ಸುಂಟಿಕೊಪ್ಪದಲ್ಲಿ ನಡೆದ ಕಳವು ಪ್ರಕರಣದಲ್ಲಿ ಜೈಲು ಸೇರಿದ್ದ ಗಣೇಶ್, ಡಿಸೆಂಬರ್ 30ರಂದು ಫೆನಾಲ್ ಸೇವಿಸಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಬೆಳಿಗ್ಗೆ 10 ಗಂಟೆ ವೇಳೆಗೆ ಆಸ್ಪತ್ರೆಯ ಶೌಚಾಲಯದ ಕಿಟಕಿ ಮೂಲಕ ಪರಾರಿಯಾಗಿದ್ದಾನೆ. ಪೊಲೀಸರು ಖೈದಿ ಗಣೇಶ್ ಗಾಗಿ ಹುಡುಕಾಟ ನಡೆಸಿದ್ದಾರೆ.
ಒಂದು ಕಮೆಂಟನ್ನು ಬಿಡಿ