ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ


01-01-2018 324

ದಾವಣಗೆರೆ: ಪರಿವರ್ತನಾ ರ‍್ಯಾಲಿ ಪ್ರಚಾರಕ್ಕೆ ಹೋಗಿದ್ದ ಬಿಜೆಪಿ ಕಾರ್ಯಕರ್ತರ ಕಾರು ತಡೆದ ಕಾಂಗ್ರೆಸ್ ಕಾರ್ಯಕರ್ತರು, ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮುದಿಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜನವರಿ 2 ರಂದು ಚನ್ನಗಿರಿ ತಾಲ್ಲೂಕಿನಲ್ಲಿ ಬಿಜೆಪಿ ಪರಿವರ್ತನಾ ರ‍್ಯಾಲಿ ನಡೆಯಲಿದ್ದು, ಈ ಹಿನ್ನೆಲೆ ಪ್ರಚಾರಕ್ಕಾಗಿ ಪ್ರತಿ ಗ್ರಾಮಗಳನ್ನು ಬಿಜೆಪಿ ಕಾರ್ಯಕರ್ತರು ಸುತ್ತುತ್ತಿದ್ದರು.

ಈ ವೇಳೆ ಮುದಿಗೆರೆ ಗ್ರಾಮಕ್ಕೆ ಹೂಗಿದ್ದು, ಗ್ರಾಮ ನಮ್ಮ ಊರಿನಲ್ಲಿ ಪ್ರಚಾರ ಮಾಡಬೇಡಿ, ಯಾರು ಬರೋದಿಲ್ಲ ಅಂತ ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರಕ್ಕೆ ಹೋಗಿದ್ದ ವ್ಯಾನ್ ತಡೆದು, ಗಾಜು ಪುಡಿ ಪುಡಿ ಮಾಡಿ ವಾಹನಗಳನ್ನು ಜಖಂಗೊಳಿಸಿದ್ದಾರೆ. ಅದಲ್ಲದೇ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಟ್ರ್ಯಾಕ್ಟರ್ ಹತ್ತಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಯುವ ಮುಖಂಡ, ಮುದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್ ಬೆಂಬಲಿಗರಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಚನ್ನಗಿರಿ ಠಾಣೆ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಮುಂದಿ ಕ್ರಮಕೈಗೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Parivathhana rally congress ಟ್ರ್ಯಾಕ್ಟರ್ ಪ್ರಚಾರ