ಬಿಜೆಪಿಯಿಂದ ನರಗುಂದ ಬಂದ್


03-01-2018 297

ಗದಗ: ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ, ಇಂದು ಗದಗ ಬಿಜೆಪಿಯಿಂದ ನರಗುಂದ ಬಂದ್ ಕರೆ ನೀಡಿದ್ದು, ನರಗುಂದ ಪಟ್ಟಣ ಸಂಪೂರ್ಣ ಬಂದ್ ಆಗಿದೆ. ನಸುಕಿನಿಂದಲೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಪ್ರಾರಂಭಿಸಿದ್ದು, ಇದರಿಂದ ವಾಹನ ಸಂಚಾರ ಸಂಪೂರ್ಣ ಸ್ತಬ್ಧವಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಕೋರ್ಟ್ ಸರ್ಕಲ್ ಮತ್ತು ಶಿವಾಜಿ ವರ್ತುಲದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದ್ದಾರೆ. ಇನ್ನು ನರಗುಂದ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮೂವರು ಡಿವೈಎಸ್ಪಿ, 10 ಸಿಪಿಐ, 14 ಪಿಎಸ್ಐ, 29 ಎಎಸ್ಐ, 4 ಕೆಎಸ್ಆರ್ ಪಿ ತುಕಡಿ, 5 ಡಿಆರ್ ತುಕಡಿ, ಸೇರಿದಂತೆ 150ಕ್ಕೂ ಹೆಚ್ಚು ಪೊಲೀಸ್ ಪೇದೆಗಳನ್ನು ನಿಯೋಜಿಸಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Mahadayi Nargund ಬಂದೋಬಸ್ತ್ ಮಹದಾಯಿ