ಮರಕ್ಕೆ ಗುದ್ದಿದ ಶಾಲಾಮಕ್ಕಳ ಬಸ್


03-01-2018 536

ಚಿತ್ರದುರ್ಗ: ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದ ಶಾಲಾ ಮಕ್ಕಳ ಬಸ್, ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹುಳಿಯಾರು ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳು ವಿದ್ಯಾರ್ಥಿಗಳನ್ನು ಚಿತ್ರದುರ್ಗದ ಹಿರಿಯೂರು ತಾಲ್ಲೂಕು ಆಸ್ಪತ್ರೆ ಹಾಗೂ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದಗಣಿ ಪ್ರೌಢಶಾಲಾ ವಿಧ್ಯಾರ್ಥಿಗಳು, ಪ್ರವಾಸ ಮುಗಿಸಿ ಮಡಿಕೇರಿಯಿಂದ ವಾಪಸ್ಸು ಬರುವಾಗ ಹಿರಿಯೂರು ಬಳಿ ಈ ದುರ್ಘಟನೆ ನಡೆದಿದೆ. ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

School Bus Accident ವಿದ್ಯಾರ್ಥಿ ಅಪಘಾತ