‘ಬಿಜೆಪಿಯವರಿಗೆ ಹೊಟ್ಟೆ ಉರಿ’-ಸಿಎಂ


06-01-2018 590

ಶಿವಮೊಗ್ಗ: ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ಸುಳಿವು ಸಿಕ್ಕಿಲ್ಲ, ಇದೊಂದು ಸಂಘಟಿತ ಅಪರಾಧ, ಘಟನೆಯಲ್ಲಿ ವ್ಯವಸ್ಥಿತ ಸಂಚು ನಡೆದಿದೆ, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ಮಾತನಾಡಿದ ಸಿಎಂ, ಶ್ರೀ ರಾಮಸೇನೆ, ಪಿಎಫ್ಐ ಯಾವುದೇ ಸಂಘಟನೆಯಾಗಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಕೊಂಡರೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದರು. ಕರಾವಳಿಯಲ್ಲಿ ಗಲೆಭೆ ಸೃಷ್ಟಿಸಿ ಸರ್ಕಾರದ ಮೇಲೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದ ಅವರು, ಇಷ್ಟೆಲ್ಲಾ ಮಾಡಿದರು ಸಹ ಕರಾವಳಿಯಲ್ಲಿ  ಕಾಂಗ್ರೆಸ್ ಹೆಚ್ಚು ಸ್ಥಾನಗಳಿಸಿರುವುದು ಬಿಜೆಪಿಯವರಿಗೆ ಹೊಟ್ಟೆ ಉರಿಯಾಗಿದೆ ಎಂದು ಹೇಳಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

siddaramaiah Gauri Lankesh ಪಿಎಫ್ಐ ಕಾನೂನು ಕ್ರಮ