ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ


08-01-2018 367

ಉಡುಪಿ: ಸಿಎಂ ಸಿದ್ದರಾಮಯ್ಯ ಇಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಉತ್ತರ ಭಾಗದ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಪ್ರವಾಸ ಆರಂಭವಾಗಲಿದೆ. ಜಿಲ್ಲೆಯಲ್ಲಿ ಸುಮಾರು 490 ಕೋಟಿಯ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಉಡುಪಿ ವಿಧಾನ ಸಭಾ ವ್ಯಾಪ್ತಿಯ ಬ್ರಹ್ಮಾವರದಲ್ಲಿ ಸಮಾವೇಶ ನಡೆಸಲಿದ್ದಾರೆ. ಸಚಿವ ಪ್ರಮೋದ್ ಮಧ್ವರಾಜ್ ನೇತೃತ್ವದಲ್ಲಿ ಬೃಹತ್ ಸಭೆ ನಡೆಯಲಿದೆ. ಇಲ್ಲಿ ಸುಮಾರು 581 ಕೋಟಿಯ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ನಡೆಯಲಿದೆ. ಸಂಜೆ ಕಾಪುವಿನಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಸಭೆ ಆಯೋಸಿಸಲಾಗಿದ್ದು, ಕಾಪುವಿನಲ್ಲಿಯೂ, ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಯೋಜಿಸಲಾಗಿದೆ. ಸಚಿವ ಸಂಪುಟದ ಪ್ರಮುಖ ಸಚಿವರು ಈ ಕಾರ್ಯಕ್ರಮಗಳಲ್ಲಿ ಸಿಎಂಗೆ ಸಾಥ್ ನೀಡಲಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

sidddaramaiah udupi ಶಿಲಾನ್ಯಾಸ ಕಾಮಗಾರಿ