‘ಬಿಜೆಪಿಗೆ ಸೋಲುವ ಭೀತಿ’


11-01-2018 306

ಕಲಬುರಗಿ: ಬಿಜೆಪಿ ನಾಯಕರಿಗೆ ಮುಂದಿನ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭೀತಿ ಎದುರಾಗಿದೆ, ಹೀಗಾಗಿಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಕಲಬುರಗಿ ಪ್ರವಾಸದಲ್ಲಿರುವ ಪರಮೇಶ್ವರ್ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಅಮಿತ್ ಷಾ ಬಂದಾಗಲೆಲ್ಲಾ ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಕಷ್ಟ ಎಂಬ ಕಾರಣಕ್ಕಾಗಿ ಅಮಿತ್ ಷಾ ಹೀಗೆ ಮಾಡುತ್ತಿದ್ದಾರೆ, ಅಮಿತ್ ಷಾ ಮತ್ತು ಪ್ರಧಾನಿ ಮೋದಿ ಏನೇ ತಂತ್ರ ಮಾಡಿದರೂ ರಾಜ್ಯದಲ್ಲಿ ಬಿಜೆಪಿ ಗೆಲುವು ಕಷ್ಟ, ರಾಜ್ಯದಲ್ಲಿ ಅವರ ಆಟ ನಡೆಯುವುದಿಲ್ಲ ಎಂದು ಹೇಳಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

G.Parameshwara KPCC ಚುನಾವಣೆ ಭೀತಿ