ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ


12-01-2018 492

ಚಿಕ್ಕಮಗಳೂರು: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರ ಉಗ್ರವಾದಿಗಳು ಎಂಬ ಹೇಳಿಕೆ ಚಿಕ್ಕಮಗಳೂರಿನಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೇಳಿಕೆ ಖಂಡಿಸಿ ಪ್ರತಿಭಟನೆಗಿಳಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಚಿಕ್ಕಮಗಳೂರಿನ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗು ಶಾಸಕ ಸಿ.ಟಿ ರವಿ ಸೇರಿದಂತೆ ಕಾರ್ಯಕರ್ತರನ್ನು ಬಂಧಿಸಲಾಯಿತು. ಈ ವೇಳೆ ಶಾಸಕ ಸಿ.ಟಿ ರವಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದಲ್ಲದೇ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ಕುಳಿತ ಬಿಜೆಪಿ ಕಾರ್ಯಕರ್ತರು ಕಾಂಗ್ರಸ್ ವಿರುದ್ಧ ಘೋಷಣೆಗಳನ್ನು ಕೂಗಿ ಸಿಎಂ ಹೇಳಿಕೆಯನ್ನು ಖಂಡಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

C.T Ravi protest ಉಗ್ರವಾದಿಗಳು ಮುತ್ತಿಗೆ