ಗಣರಾಜ್ಯೋತ್ಸವಕ್ಕೆ ಭರದ ಸಿದ್ಧತೆ


24-01-2018 614

ಬೆಂಗಳೂರು: 69ನೇ ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆ, ನಗರದ ಎಂ.ಜಿ.ರಸ್ತೆಯಲ್ಲಿರುವ ಮಾಣಿಕ್ ಷಾ ಪೇರಡ್ ಗ್ರೌಂಡ್ನಲ್ಲಿ ಪೂರ್ವ ಸಿದ್ಧತಾ ಕಾರ್ಯಗಳನ್ನು ಕೈಗೊಂಡಿದ್ದು, ಪರೇಡ್ ನ ತಾಲೀಮು ನಡೆಸಲಾಗುತ್ತಿದೆ. ಗಣರಾಜ್ಯೋತ್ಸವಕ್ಕೆ ಪೂರ್ವ ಸಿದ್ಧತೆಗಳನ್ನು ಪೊಲೀಸ್ ಇಲಾಖೆ ನಡೆಸುತ್ತಿದೆ. ಈ ಕುರಿತಂತೆ ಭದ್ರತೆ, ಇನ್ನಿತರ ವಿಷಯಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ನೇತ್ರತ್ವದಲ್ಲಿ ಸಭೆಯನ್ನು ಏರ್ಪಡಿಸಿದ್ದು, ಸುರಕ್ಷತಾ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ಸೂಚನೆಗಳನ್ನು ಸಭೆಯಲ್ಲಿ ನಿರ್ಣಯಿಸಲಾಗುವುದು ಎನ್ನಲಾಗಿದೆ. ಅದಲ್ಲದೇ ಇಲಾಖೆಯ ಉನ್ನತ ಅಧಿಕಾರಿಗಳು ಪೂರ್ವ ಸಿದ್ಧತಾ ಕಾರ್ಯಗಳಲ್ಲಿ ಭಾಗಿಯಾಗಿದ್ದು, ಹೆಚ್ಚಿನ ನಿಗಾ ವಹಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ