ನಕಲಿ ಅಂಕಪಟ್ಟಿ ಮಾರಾಟ ಜಾಲ ಪತ್ತೆ


24-01-2018 532

ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಬೆಂಗಳೂರು ಯೂನಿವರ್ಸಿಟಿ ಸೇರಿದಂತೆ ಹಲವಾರು ಯೂನಿವರ್ಸಿಟಿಗಳ ನಕಲಿ ಮಾರ್ಕ್ಸ್ ಕಾರ್ಡ್ ಪ್ರಿಂಟ್ ಮಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮೂವರನ್ನು ಬಂಧಿಸಿದ್ದಾರೆ.

ಮಹಾಲಕ್ಷ್ಮಿಲೇಔಟ್ನ ಮನೆಯೊಂದರಲ್ಲಿ ಎಲ್ಲಾ ಯೂನಿವರ್ಸಿಟಿಗಳ ಮಾರ್ಕ್ಸ್ ಕಾರ್ಡ್ ಪ್ರಿಂಟ್ ಮಾಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಬಿಬಿಎಂ, ಬಿಬಿಎ, ಎಂಬಿಎ. ಎಂಎ, ಎಂಜಿನಿಯರಿಂಗ್ ಸೇರಿದಂತೆ ಎಲ್ಲಾ ಮಾರ್ಕ್ಸ್ ಕಾರ್ಡ್ಗಳನ್ನು ಪ್ರಿಂಟ್ ಮಾಡುತ್ತಿದ್ದ ದಂಧೆಕೋರರು ಸಿಕ್ಕಿಬಿದ್ದಿದ್ದಾರೆ.

ಇದುವರೆಗೂ ಆಂಧ್ರ, ತಮಿಳುನಾಡು, ಕೇರಳ, ಮಹರಾಷ್ಟ್ರ ಸೇರಿದಂತೆ ಉತ್ತರ ಭಾರತದ ವಿದ್ಯಾರ್ಥಿಗಳಿಗೂ ಲಕ್ಷ ಲಕ್ಷ  ಹಣ ಪಡೆದು ನಕಲಿ ಮಾರ್ಕ್ಸ್ ಕಾರ್ಡ್ಗಳನ್ನು ಶ್ರೀನಿವಾಸ್ ರೆಡ್ಡಿ ಎಂಬಾತ ಕೊಡುತ್ತಿದ್ದ. ಇವನು ನೀಡುವ ನಕಲಿ ಮಾರ್ಕ್ ಕಾರ್ಡ್ ತಗೊಂಡು ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಗಳಲ್ಲಿ ಹಲವಾರು ಮಂದಿ ಕೆಲಸ ಗಿಟ್ಟಿಸಿಕೊಂಡಿದ್ದು, ಸರ್ಕಾರಿ ಕೆಲಸಗಳಿಗೂ ಸೇರಿದ್ದಾರೆ ಎನ್ನಲಾಗಿದೆ. ಸದ್ಯ ಸಿಸಿಬಿ ಪೊಲೀಸರು 12 ಸಾವಿರಕ್ಕೂ ಹೆಚ್ಚು ನಕಲಿ ಮಾರ್ಕ್ಸ್ ಕಾರ್ಡ್ಗಳನ್ನು ವಶಕ್ಕೆ ಪಡೆದಿದ್ದು ತನಿಖೆ ಕೈಗೊಂಡಿದ್ದಾರೆ.

 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

fake marks card network ದಂಧೆಕೋರರು ಯೂನಿವರ್ಸಿಟಿ