ಕುಖ್ಯಾತ ನೇಪಾಳಿ ಗ್ಯಾಂಗ್ ಬಂಧನ


24-01-2018 522

ಬೆಂಗಳೂರು: ಬಿಜೆಪಿ ಮುಖಂಡನ ಮನೆಯಲ್ಲಿ 2 ಕೆಜಿಯಷ್ಟು ಚಿನ್ನಾಭರಣ ಕಳ್ಳತನ ಮಾಡಿ ಎಸ್ಕೇಪಾಗಿದ್ದ ಕುಖ್ಯಾತ ನೇಪಾಳಿ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1ಕೆಜಿ  600ಗ್ರಾಂ. ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಗೂರ್ಖಾ ಕೆಲಸಕ್ಕೆಂದು ನೇಪಾಳದಿಂದ ಬಂದು ಕಳ್ಳತನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಗೂರ್ಖಾ ಕೆಲಸ ಮಾಡಲು ರಾತ್ರಿ ವೇಳೆಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಏರಿಯಾಗಳನ್ನು ಹುಡುಕುತ್ತಿದ್ದ ತಂಡ, ಕಳೆದ ವರ್ಷ ಡಿಸೆಂಬರ್ ನಲ್ಲಿ ಬಿಜೆಪಿ ಮುಖಂಡನ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಈ ಕುರಿತಂತೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ನೇಪಾಳಿ ಗ್ಯಾಂಗನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

nepali gang robbery ಕುಖ್ಯಾತ ತನಿಖೆ