ರೈಲು ತಡೆದು ಪ್ರತಿಭಟನೆ


25-01-2018 386

ಯಾದಗಿರಿ: ಮಹದಾಯಿ ನೀರಿಗಾಗಿ ಕನ್ನಡ ಪರ ಸಂಘಟನೆಗಳು ಇಂದು ಬಂದ್ ನಡೆಸುತ್ತಿದ್ದು, ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಯಾದಗಿರಿಯಲ್ಲಿ, ಬೆಂಗಳೂರು-ಮುಂಬೈ ಉದ್ಯಾನ್ ಎಕ್ಸ್ಪ್ರಸ್ ರೈಲು ತಡೆದು ಪ್ರತಿಭಟನೆ ನಡೆಸಿದ್ದಾರೆ. ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿರುವ ಕರವೇ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ತಿಕೆ ವಹಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ