‘ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಸಿಎಂ ಪತ್ರ’


25-01-2018 533

ಬೆಂಗಳೂರು: ಸಮಾಜ ಸೇವೆ, ಶಿಕ್ಷಣ, ಆಧ್ಯಾತ್ಮ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮತ್ತು ಸಲ್ಲಿಸುತ್ತಿರುವ ನಡೆದಾಡುವ ದೇವರು ಎಂದೇ ಪ್ರಖ್ಯಾತಿ ಪಡೆದಿರುವ ಸಿದ್ದಗಂಗಾ ಮಠದ ಮಠಾಧೀಶರಾದ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ದೇಶದ ಅತ್ಯುನ್ನತ ಗೌರವ 'ಭಾರತ ರತ್ನ' ನೀಡುವಂತೆ, ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಸ್ವಾಮೀಜಿ ಏಳು ದಶಕಗಳಿಗೂ ಹೆಚ್ಚು ಕಾಲದಿಂದ ಸಮಾಜ ಸೇವೆ, ಶಿಕ್ಷಣ, ಆಧ್ಯಾತ್ಮ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ ಎಂದು ಸಿಎಂ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಶ್ರೀಗಳ ಸೇವೆಯನ್ನು ಪರಿಗಣಿಸಿ ಭಾರತ ರತ್ನ ನೀಡುವಂತೆ ಮನವಿ ಮಾಡಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Shivakumara Swami siddaganga mutt ಸಮಾಜ ಸೇವೆ ಭಾರತ ರತ್ನ