ಬ್ಯಾಂಕ್ ದರೋಡೆ: ಲಕ್ಷಾಂತರ ಹಣ ಲೂಟಿ


29-01-2018 377

ತುಮಕೂರು: ತುಮಕೂರಿನ ಹಿರೇಹಳ್ಳಿಯಲ್ಲಿನ ಎಸ್.ಬಿ.ಐ ಬ್ಯಾಂಕ್ನಲ್ಲಿ ದರೋಡೆ ನಡೆದಿದೆ. ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬ್ಯಾಂಕ್ ಒಳನುಗ್ಗಿ ದರೋಡೆ ನಡೆಸಿದ್ದಾರೆ. ಬ್ಯಾಂಕ್ ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದಲ್ಲಿದ್ದು, ಕಳೆದ‌ ತಿಂಗಳಷ್ಟೇ ಇದೇ ಬ್ಯಾಂಕ್ನಲ್ಲಿ, ಬ್ಯಾಂಕ್ ಗೋಡೆ ಕೊರೆದು 20 ಲಕ್ಷ ದೋಚಲಾಗಿತ್ತು. ಇದೀಗ ಮತ್ತೆ ದುಷ್ಕರ್ಮಿಗಳು ಬ್ಯಾಂಕ್ ನಲ್ಲಿ ತಮ್ಮ ಕೈಚಳಕ ತೋರಿದ್ದಾರೆ. ಬ್ಯಾಂಕಿನಲ್ಲಿದ್ದ ಹಣ, ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ಕದ್ದೊಯ್ದಿದ್ದಾರೆ. ಇನ್ನು ಬ್ಯಾಂಕ್ ಮುಂದೆ ಪ್ರಜ್ಞೆ ತಪ್ಪಿ ಬಿದ್ದಿದ್ದ ಸೆಕ್ಯೂರಿಟಿ ಗಾರ್ಡ್ ಅನ್ನು ರಾತ್ರಿ ಬೀಟ್‌ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ ನೀಡಿ ‌ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಕಳ್ಳರಿಗಾಗಿ ಶೋಧ ನಡೆಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Bank robbery security guard ದರೋಡೆ ಬೀಟ್‌ ಪೊಲೀಸರು