ಗಂಗಾವತಿಯಲ್ಲಿ ಬಿಗುವಿನ ವಾತಾವರಣ


30-01-2018 553

ಕೊಪ್ಪಳ: ಒಳಗಡೆ ಶ್ರೀರಾಮನ ಹೆಸರು ಹೇಳಿ ಹೊರಗಡೆ ಕೊಲೆ, ದರೋಡೆ, ಅತ್ಯಾಚಾರ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ, ಶಾಸಕ ಇಕ್ಬಾಲ್ ಅನ್ಸಾರಿ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಅಶೋಕ ವೃತ್ತದಲ್ಲಿ ಜಮಾಯಿಸಿರುವ ನೂರಾರು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.

ಇದೇ ವೇಳೆ ಶಾಸಕ ಇಕ್ಬಾಲ್ ಅನ್ಸಾರಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಕ್ಬಾಲ್ ಅನ್ಸಾರಿ ಭಾವಚಿತ್ರಕ್ಕೆ ಕಿವಿಗರ ಓಲೆ, ಮೂಗಿಗೆ ಮೂಗುತಿ, ಹಣೆಗೆ 9 ನಂಬರ್ ಬರೆದು, ಘೋಷಣೆಗಳನ್ನು ಕೂಗಿ, ಅನ್ಸಾರಿ ವಿರುದ್ಧ ಕ್ರಮಕ್ಕೆ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇನ್ನು ಶಾಸಕ ಇಕ್ಬಾಲ್ ಅನ್ಸಾರಿ ಮನೆಗೆ ಮುತ್ತಿಗೆಗೆ ಯತ್ನಿಸಿದ್ದು, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಸಂಸದ ಶಿವರಾಮೇಗೌಡರನ್ನು ಸೇರಿದಂತೆ ನೂರಾರು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಇದರಿಂದ ಗಂಗಾವತಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

 


ಒಂದು ಕಮೆಂಟನ್ನು ಬಿಡಿ