‘ಗ್ರಾಮ ವಾಸ್ತವ್ಯಕ್ಕೆ ಪರಂ ಸಲಹೆ’


31-01-2018 598

ತುಮಕೂರು: ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಗೂ ಗ್ರಾಮ ವಾಸ್ತವ್ಯ ಮಾಡುವಂತೆ ಫರ್ಮಾನು ಹೊರಡಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದರು. ತುಮಕೂರಿನ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಕೋಳಾಲ ಹೋಬಳಿಯ ಎಂ.ಬೇವಿನ ಹಳ್ಳಿ ಗ್ರಾಮದ ಯಾದವ ಸಮುದಾಯದ ರೈತ ರಂಗಧಾಮಯ್ಯ ಮನೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಗ್ರಾಮ ವಾಸ್ತವ್ಯ ಪರಿಕಲ್ಪನೆ ಸಮಾಜಮುಖಿಯಾಗಿದೆ ಎಂದರು.

ಗ್ರಾಮ ವಾಸ್ಥವ್ಯ ಮಾಡುವ ಮೂಲಕ ಜನ ಸಾಮಾನ್ಯರ ಬಳಿಗೆ ಹೋಗಿ ಅವರ ಕಷ್ಟಗಳನ್ನು ಹಾಗೂ ಗ್ರಾಮಗಳ ಪರಿಸ್ಥಿತಿಯನ್ನು ಅರಿಯಲು ಅನುಕೂಲವಾಗಲಿದ್ದು, ಹಿಂದೆ ಬೆಂಗಳೂರಿನಿಂದ ಬಳ್ಳಾರಿಯವರೆಗೂ ಕಾಲು ನಡಿಗೆ ಮಾಡಿ ಸಾಮಾನ್ಯ ಜನರ ಕಷ್ಟ ಅರಿಯಲು ಸಾಧ್ಯವಾಯಿತು. ಹಾಗೆಯೇ ಮುಂದಿನ ದಿನಗಳಲ್ಲಿ ಪಕ್ಷದ ಎಲ್ಲಾ ಶಾಸಕರಿಗೂ ಪ್ರತಿ 15 ದಿನಗಳಿಗೊಮ್ಮೆ ಅಧವಾ ವಾರಕ್ಕೂಮ್ಮೆ ಯಾದರೂ ಗ್ರಾಮ ವಾಸ್ತವ್ಯ ಮಾಡುವಂತೆ ಸಲಹೆ ನೀಡುವುದರೊಂದಿಗೆ ಪಕ್ಷದಿಂದ ಫರ್ಮಾನು ಹೊರಡಿಸಲಾಗುವುದು ಎಂದು ತಿಳಿಸಿದರು. ಕೆಪಿಸಿಸಿ ಅಧ್ಯಕ್ಷರು ಜನ ಸಮಾನ್ಯರ ಕೈಗೆ ಸಿಗದ ರಾಜಕಾರಣಿ ಎಂಬ ಪ್ರತಿ ಪಕ್ಷಗಳ ಆರೋಪಕ್ಕೆ ಹೊಸ ವರ್ಷದ ಪ್ರಾರಂಭದಲ್ಲೇ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಜನ ಸಾಮಾನ್ಯರ ಕಷ್ಟ ಅರಿಯಲು ಮುಂದಾಗಿರುವುದಾಗಿ ತಿಳಿಸಿದರು.

ಇನ್ನು ನೈತಿಕತೆ ಇಲ್ಲದ ಬಿಜೆಪಿ ಪಕ್ಷದವರು ಓವೈಸಿ ಜೊತೆ ಒಳ ಒಪ್ಪಂದ ಮಾಡಿಕೊಳ್ಳಲಿ. ಅದರಿಂದ ಅವರಿಗೆ ಕರ್ನಾಟಕದಲ್ಲಿ ಯಾವುದೇ ಲಾಭ ಮಾಡಿಕೊಳ್ಳಲು ಸಾಧ್ಯವಿಲ್ಲ. ಬಿಜೆಪಿ ಒಳಂಗಿಂದೊಳಗೆ ಓವೈಸಿ ಜೊತೆ ಮಾತುಕತೆ ನಡೆಸುತ್ತಿರುವುದು ನಮಗೆ ಮೊದಲೆ ಗೊತ್ತಿತ್ತು, ಮುಸ್ಲಿಂ ಸಮುದಾಯವನ್ನು ದ್ವೇಷಿಸುವ ಬಿಜೆಪಿ ಪಕ್ಷ, ಓವೈಸಿ ಸಖ್ಯ ಬೆಳೆಸಿದೆ, ಅವರಿಗೆ ನೈತಿಕತೆಯೇ ಇಲ್ಲ. ಉತ್ತರ ಪ್ರದೇಶದಲ್ಲಿ ನಡೆಸಿದ ತಂತ್ರಗಾರಿಕೆ ಕರ್ನಾಟಕದಲ್ಲಿ ನಡೆಯುವುದಿಲ್ಲ ಎಂದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

G. Parameshwara KPCC ನೈತಿಕತೆ ಓವೈಸಿ