ಶಾಲೆ ಮುಂದೆ ಪೋಷಕರ ಪ್ರತಿಭಟನೆ


01-02-2018 752

ದಾವಣಗೆರೆ: ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಸತಿ ಶಾಲೆಯ ಮುಂದೆ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ, ಕೆರೆಬಿಳಚಿ ಗ್ರಾಮದಲ್ಲಿನ ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿ ಶರತ್(16) ಹತ್ತು ದಿನಗಳ ಹಿಂದೆ ಶಾಲೆಯಿಂದ ನಾಪತ್ತೆಯಾಗಿದ್ದ.  ಶರತ್ 10ನೇ ತರಗತಿ ಓದುತ್ತಿದ್ದು, ಈತ ಸಾವನ್ನಪ್ಪಿದ್ದರು ವಿಷಯ ತಿಳಿಸದೇ ಮುಚ್ಚಿಹಾಕುತ್ತಿದ್ದಾರೆ ಎಂದು ಪೋಷಕರ ಆರೋಪಿಸಿದ್ದಾರೆ.

ಈ ಕುರಿತು ವರದಿ ಮಾಡಲು ಬಂದ ಮಾಧ್ಯಮದವರನ್ನು ಕೂಡ ಶಾಲೆ ಒಳಗೆ ಬಿಟ್ಟಿಲ್ಲ, ಇದರಿಂದ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶಗೊಂಡಿದ್ದಾರೆ, ಸ್ಥಳಕ್ಕೆ ಬಸವಪಟ್ಟಣ ಠಾಣಾ ಪೋಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Missing Morarji Desai ಪೋಷಕ ಆಡಳಿತ ಮಂಡಳಿ