ಹೊಳೆಯಲ್ಲಿ ಮುಳುಗಿ ವ್ಯಕ್ತಿ ದುರ್ಮರಣ


01-02-2018 296

ಕೊಡಗು: ಸ್ನೇಹಿತರೊಂದಿಗೆ ಹೊಳೆಯಲ್ಲಿ ಈಜಲು ಹೋಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗಾಳಿಬೀಡು ಗ್ರಾಮದ ನಿವಾಸಿ ಹರೀಶ್ (37) ಮೃತ ದುರ್ದೈವಿ. ಮಡಿಕೇರಿ ಸಮೀಪದ ಕೂಟುಹೊಳೆಯಲ್ಲಿ ಈ ದುರ್ಘಟನೆ ನಡೆದಿದೆ. ಹೊಳೆಯಲ್ಲಿ ಈಜಲೆಂದು ಮೂವರು ಸ್ನೇಹಿತರು ತೆರಳಿದ್ದು, ಈಜುವ ವೇಳೆ ನೀರಿನ ರಭಸ ಹೆಚ್ಚಾಗಿದೆ. ಇದರ ನಡುವಯೇ ಕಷ್ಟಪಟ್ಟು ಇಬ್ಬರು ಈಜಿ ದಡ ಸೇರಿದ್ದಾರೆ. ಆದರೆ ಹರೀಶ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನು ಮೃತದೇಹಕ್ಕಾಗಿ ನುರಿತ ಈಜುಗಾರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ನಡೆಸಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 

 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

swiming lake ಹೊಳೆ ಮಡಿಕೇರಿ