ರಾಮಲಿಂಗಾರೆಡ್ಡಿ ರಾಜೀನಾಮೆಗೆ ಬಿಜೆಪಿ ಆಗ್ರಹ


02-02-2018 391

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಇಂದು ನಗರದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು, ಸಂತೋಷ್ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಯಾಗಿಸಬೇಕು, ಸಂತೋಷ್ ಕುಟುಂಬಕ್ಕೆ 50ಲಕ್ಷ ರೂ.ಪರಿಹಾರ ನೀಡಿ, ಅವರ ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಕೊಲೆ ಪ್ರಕರಣಗಳು ನಡೆಯುತ್ತಿದ್ದರೂ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸರ್ಕಾರ ವಿಫಲವಾಗಿದ್ದು, ಗೃಹಸಚಿವ ರಾಮಲಿಂಗಾರೆಡ್ಡಿ ಕೂಡಲೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ