ಶಾಲಾ ವಾಹನ ಪಲ್ಟಿ


03-02-2018 465

ದಾವಣಗೆರೆ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಮಿನಿ ವಾಹನ ಪಲ್ಟಿಯಾಗಿ, ಆರು ಮಕ್ಕಳು ಗಾಯಗೊಂಡಿದ್ದಾರೆ. ಅದರಲ್ಲಿ ಮೂವರಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ಘಟನೆಯು ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಬಂಟನಹಳ್ಳಿ ಕ್ರಾಸ್ ಬಳಿ ನಡೆದಿದೆ. ಜಗಳೂರಿನ ಸೊಕ್ಕೆ ಗ್ರಾಮದ ಶ್ರೀ ಮಾರುತಿ ಗ್ರಾಮಾಂತರ ಪ್ರೌಢ ಶಾಲಾ ಮಕ್ಕಳು, ಗೋಪಲಪುರ ಗ್ರಾಮದಿಂದ ಸೊಕ್ಕೆ ಗ್ರಾಮದ ಶಾಲೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಗಾಯಗೊಂಡ ಮಕ್ಕಳು ಸೊಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಜಗಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಚಾಲಕನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

School Bus Accident ಪ್ರೌಢ ಶಾಲೆ ಪ್ರಾಣಾಪಾಯ