ಸುಪ್ರೀಂನಲ್ಲಿ ಬಿಎಸ್ ವೈ ವಿರುದ್ಧದ ಅರ್ಜಿ ವಿಚಾರಣೆ


05-02-2018 367

ಬೆಂಗಳೂರು: ಯಡಿಯೂರಪ್ಪ ವಿರುದ್ಧದ 15 ಡಿನೋಟಿಫಿಕೇಷನ್ ಪ್ರಕರಣಗಳಿಗೆ ಸಂಬಂಧಿಸಿದಂತೆ, ಹೈಕೋರ್ಟ್ ತೀರ್ಪು ಪ್ರಶ್ನಿಸಿ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂಕೋರ್ಟ್ನಲ್ಲಿ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಹದಿನೈದು ಪ್ರಕರಣಗಳನ್ನು ಹೈಕೋರ್ಟ್ ವಜಾಗೊಳಿಸಿತ್ತು, ಇದನ್ನು ಪ್ರಶ್ನಿಸಿ ಸಿರಾಜಿನ್ ಬಾಷ ಹಾಗು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅದರಂತೆ, ನ್ಯಾಯಮೂರ್ತಿ ಚಲಮೇಶ್ವರ್ ನೇತೃತ್ವದ ದ್ವಿಸದಸ್ಯ ಪೀಠದಿಂದ ಇಂದು ವಿಚಾರಣೆ ನಡೆಸಲಿದೆ. ಬಾಷಾ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಜೊತೆಗೆ ರಾಜ್ಯ ಸರ್ಕಾರದ ಅರ್ಜಿಯೂ ವಿಚಾರಣೆಗೆ ಬರಲಿದೆ. ಎರಡೂ ಅರ್ಜಿಗಳ ಬಗ್ಗೆ ಒಟ್ಟಾಗಿ ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇನ್ನು ರಾಜ್ಯ ಸರ್ಕಾರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದಿಸಲಿದ್ದಾರೆ.


ಒಂದು ಕಮೆಂಟನ್ನು ಬಿಡಿ