ಚಳಿಯಲ್ಲೇ ಬಿಸಿಯೂಟದವರ ಪ್ರತಿಭಟನೆ


07-02-2018 619

ಬೆಂಗಳೂರು: ಕನಿಷ್ಠ ವೇತನ ನಿಗದಿ, ಸೇವಾ ಭದ್ರತೆ, ಪಿಎಫ್ ಸೌಲಭ್ಯ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಸಿಯೂಟ ತಯಾರಕ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ಬಿಸಿಯೂಟ ತಯಾರಕರು, ಚಳಿಯ ನಡುವೆಯೇ ಪ್ರತಿಭಟನೆ ಮುಂದುವರಿಸಿದ್ದಾರೆ. ಬಿಸಿಯೂಟ ತಯಾರಿಕೆ ವೇಳೆ, ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತೇವೆ, ಕೆಲವೊಮ್ಮೆ ಜೀವಕ್ಕೆ ಅಪಾಯವೂ ಇರುತ್ತದೆ, ಹೀಗಿರುವಾಗ ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

protest bisi oota ಸೇವಾ ಭದ್ರತೆ ಬೇಡಿಕೆ