ನಂದೀಶ್ ರೆಡ್ಡಿಗೆ ಭೈರತಿ ಸವಾಲ್..!


07-02-2018 688

ಬೆಂಗಳೂರು: ಮಾಜಿ ಶಾಸಕ ನಂದೀಶ್ ರೆಡ್ಡಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ  ಬಸವರಾಜ್, ಚುನಾವಣೆ ಸಂದರ್ಭದಲ್ಲಿ ಸುಳ್ಳು ಆರೋಪ ಮಾಡಿ, ಕ್ಷೇತ್ರದ ವಾತಾವರಣ ಕಲುಷಿತಗೊಳಿಸುತ್ತಿದ್ದಾರೆ. ಕೆ.ಆರ್.ಪುರಂ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯ ಸಹಿಸದೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ‘ನಾನು ಭ್ರಷ್ಟಾಚಾರ ಮಾಡಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ, ಸಾಬೀತು ಮಾಡಲಾಗದಿದ್ದರೆ ನಂದೀಶ್ ರೆಡ್ಡಿ ರಾಜಕೀಯ ನಿವೃತ್ತಿ ಪಡೆಯಲಿ’ ಎಂದು ಭೈರತಿ ಬಸವರಾಜ್ ಸವಾಲ್ ಹಾಕಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Byrathi basavaraj Nandiesha Reddy ಚುನಾವಣೆ ರಾಜಕೀಯ