ಬೆಹನ್ ಜಿ-ಗೌಡಾಜಿ ಮೈತ್ರಿ


08-02-2018 546

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಹುಜನ ಸಮಾಜ ಪಕ್ಷ ಮತ್ತು ಜೆಡಿಎಸ್ ಮೈತ್ರಿ ಘೋಷಿಸಿದ್ದು, ಈ ಕುರಿತು ಅಧಿಕೃತ ಘೋಷಣೆ ಹೊರಬಿದ್ದಿದೆ. ಬಿಎಸ್ಪಿ-ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮೈತ್ರಿ ಪ್ರಕಟಿಸಿದ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ, ಈ ಬಾರಿ ಕರ್ನಾಟಕದಲ್ಲಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು. 20ರಿಂದ 30 ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧಿಸಲಿದ್ದು, ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ, ಎಲ್ಲ ಕಡೆ ಜಂಟಿ ಪ್ರಚಾರ ನಡೆಸಲಾಗುವುದು ಎಂದು ಡ್ಯಾನಿಶ್ ಅಲಿ ತಿಳಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Mayawati BSP ಅಧಿಕೃತ ಬಿಎಸ್ಪಿ-ಜೆಡಿಎಸ್